alex Certify ಸಮಂತಾ ಅಭಿನಯದ ʼಯಶೋಧʼ ಟೀಸರ್ ಸೆಪ್ಟೆಂಬರ್ 2ಕ್ಕೆ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಂತಾ ಅಭಿನಯದ ʼಯಶೋಧʼ ಟೀಸರ್ ಸೆಪ್ಟೆಂಬರ್ 2ಕ್ಕೆ ರಿಲೀಸ್

ಹರೀಶ್ ನಿರ್ದೇಶನದ ಸಮಂತಾ ಅಭಿನಯದ ಬಹುನಿರೀಕ್ಷಿತ ʼಯಶೋದಾʼ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ.

ಈ ಕುರಿತು ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಶ್ರೀದೇವಿ ಮೂವೀಸ್ ಬ್ಯಾನರ್ ನಡಿ ಶಿವಲೆಂಕ ಕೃಷ್ಣಪ್ರಸಾದ್ ನಿರ್ಮಾಣ ಮಾಡಿದ್ದು, ಮಣಿಶರ್ಮ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ

ಸಮಂತ ಸೇರಿದಂತೆ ಉನ್ನಿ ಮುಕುಂದನ್, ರಾವ್ ರಮೇಶ್, ವರಲಕ್ಷ್ಮಿ ಶರತ್ ಕುಮಾರ್, ಪ್ರಿಯಾಂಕ ಶರ್ಮಾ, ಕಲ್ಪಿಕ ಗಣೇಶ್, ಮುರಳಿ ಶರ್ಮಾ, ಸಂಪತ್ ರಾಜ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

ಆಗಸ್ಟ್ 12 ರಂದು ತೆರೆಮೇಲೆ ಬರಬೇಕಿದ್ದ ಈ ಸಿನಿಮಾ ಬಿಡುಗಡೆ ದಿನಾಂಕವನ್ನು ಕಾರಣಾಂತರದಿಂದ ಮುಂದೂಡಲಾಗಿತ್ತು. ಸದ್ಯದಲ್ಲೇ ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...