ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರದಂದು ನಡೆದಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿವೇಶನ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯುವಾಗ ಗೊಂದಲ ಉಂಟಾಗಿತ್ತು.
ಈ ಸಂದರ್ಭದಲ್ಲಿ ನಿವೇಶನ ನಮಗೆ ನೀಡಿ ಎಂದು ಜನರು ಮುಗಿಬಿದ್ದಿದ್ದು, ಹಕ್ಕು ಪತ್ರ ಸಿಗದಿದ್ದವರು ನಿಂದಿಸಲು ಆರಂಭಿಸಿದ್ದಾರೆ. ಆಗ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದು, ಈ ವೇಳೆ ಸಚಿವ ಸೋಮಣ್ಣ ಕಪಾಳ ಮೋಕ್ಷ ಮಾಡಿದ್ದಾರೆ.