ಬೆಂಗಳೂರು: ಸುರಕ್ಷತಾ ಮಾನದಂಡಗಳನ್ನು ಅನುಸರಿಸದ ರಾಜ್ಯದಲ್ಲಿನ 10 ಸಾವಿರ ಖಾಸಗಿ ಶಾಲೆಗಳ ಬಾಗಿಲು ಮುಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಆದರೆ, ಶಾಲೆಗಳನ್ನು ಮುಚ್ಚದಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದ್ದು, ಬಡ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಅಂತಹ ಶಾಲೆಗಳನ್ನು ಮುಚ್ಚಬಾರದು ಎಂದು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿದೆ.
ಈಗಾಗಲೇ ಇಂತಹ ಶಾಲೆಗಳಿಗೆ ಲೋಕೋಪಯೋಗಿ ಇಲಾಖೆ ಮಾರ್ಗಸೂಚಿಗಳನ್ನು ನೀಡಿದೆ. 10 ದಿನಗಳೊಳಗಾಗಿ ಸುರಕ್ಷತಾ ಪ್ರಮಾಣಗಳನ್ನು ಅಳವಡಿಸಲು ಸೂಚಿಸಲಾಗಿದೆ. ಆದರೆ, ಇಂದಿಗೂ ಈ ಮಾರ್ಗಸೂಚಿಗಳನ್ನು ಪಾಲಿಸಲಾಗಿಲ್ಲ ಎನ್ನಲಾಗುತ್ತಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ, 7 ಹೊಸ ಪ್ರಕರಣ ಸೇರಿ 17 ಕ್ಕೇರಿದ ಸೋಂಕಿತರ ಸಂಖ್ಯೆ
ಹೀಗಾಗಿಯೇ 10 ಸಾವಿರ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಗ್ರಾಮೀಣ ಭಾಗದ, ಮಠಾಧೀಶರು ನಡೆಸುತ್ತಿರುವ ಹಾಗೂ ಸಣ್ಣ ಮತ್ತು ಮಧ್ಯಮ ಶಾಲೆಗಳು ಮುಚ್ಚುವ ಹಂತದಲ್ಲಿವೆ ಎಂದು ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.