ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಒಂದೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ 10 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಲ್ಲದೇ ಈ ಕುರಿತಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಗೆ ಮಾಹಿತಿ ರವಾನಿಸಲಾಗಿತ್ತು.
ಇದಾದ ಬಳಿಕ ರೈಲ್ವೇ ಇಲಾಖೆ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು. ಇದೀಗ ಸ್ಟಾಫ್ ಸೆಲೆಕ್ಷನ್ ಕಮೀಷನ್ ಸಹ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 70 ಸಾವಿರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ.
ಈ ಕುರಿತಂತೆ ಶೀಘ್ರದಲ್ಲೇ ಸ್ಟಾಫ್ ಸೆಲೆಕ್ಷನ್ ಕಮೀಷನ್ ವೆಬ್ ಸೈಟ್ ನಲ್ಲಿ ಸಂಪೂರ್ಣ ಮಾಹಿತಿ ನೀಡಲಿದ್ದು, ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಕೆ ಸೇರಿದಂತೆ ಇತರೆ ವಿವರಗಳಿಗಾಗಿ ವೆಬ್ ಸೈಟ್ ssc.nic.in ಗೆ ಭೇಟಿ ನೀಡಬಹುದಾಗಿದೆ.