alex Certify ಸರ್ಕಾರಿ ಕಚೇರಿಗಳಲ್ಲಿ ಹಿರಿಯರಿಗೆ ಗೌರವ ಕೊಡದಿದ್ದರೆ ಶಿಸ್ತುಕ್ರಮ; ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಕಚೇರಿಗಳಲ್ಲಿ ಹಿರಿಯರಿಗೆ ಗೌರವ ಕೊಡದಿದ್ದರೆ ಶಿಸ್ತುಕ್ರಮ; ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಖಡಕ್ ಸೂಚನೆ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅಲೆದಾಡಿಸುವುದು ಸಾಮಾನ್ಯ ಸಂಗತಿ. ಅದರಲ್ಲೂ ಕೆಲ ನೌಕರರಂತೂ ದಾಖಲೆಗಳ ನೆಪದಲ್ಲಿ ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಈ ಕುರಿತಂತೆ ‘ತಬರನ ಕಥೆ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನೌಕರಶಾಹಿಯ ವರ್ತನೆಯನ್ನು ಬಿಂಬಿಸಲಾಗಿದೆ.

ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಶಿಸ್ತು ತರಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿತ್ತು. ಅಲ್ಲದೆ 2021 ರ ಜೂನ್ 21ರಂದು ಸುತ್ತೋಲೆಯೊಂದನ್ನು ಹೊರಡಿಸಿ ಸರ್ಕಾರಿ ಕಚೇರಿಗಳಿಗೆ ಬರುವ ಹಿರಿಯ ನಾಗರಿಕರಿಗೆ ಗೌರವ ನೀಡಬೇಕೆಂದು ಸೂಚಿಸಲಾಗಿತ್ತು.

ಇಷ್ಟಾಗಿಯೂ ಕೂಡ ಸರ್ಕಾರಿ ಕಚೇರಿಗಳಲ್ಲಿ ಇದನ್ನು ಉಲ್ಲಂಘಿಸಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗಿದೆ. ಹಿರಿಯ ನಾಗರಿಕರು ಕೆಲಸದ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೆ ಗೌರವವಾಗಿ ವರ್ತಿಸಿ ಕೂರಲು ಆಸನದ ವ್ಯವಸ್ಥೆ ಮಾಡಬೇಕು. ಜೊತೆಗೆ ಅವರ ಮನವಿಯನ್ನು ಪರಿಗಣಿಸಬೇಕು ಎಂದು ತಿಳಿಸಲಾಗಿದೆ. ಒಂದೊಮ್ಮೆ ಇದನ್ನು ಪಾಲಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...