ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯವನ್ನು 2006ರ ಏಪ್ರಿಲ್ 1 ರಿಂದಲೇ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಬುಧವಾರದಂದು ಆದೇಶ ಹೊರಡಿಸಲಾಗಿದ್ದು, ಈ ಹಿಂದೆ 2018ರ ಏಪ್ರಿಲ್ 1ರಿಂದ ಜಾರಿಗೊಳಿಸಿ ಹೊರಡಿಸಿದ್ದ ಆದೇಶವನ್ನು ಪರಿಷ್ಕರಿಸಲಾಗಿದೆ. ಹೀಗಾಗಿ 2006ರ ಏಪ್ರಿಲ್ 1ರಿಂದಲೇ ಇದು ಜಾರಿಗೆ ಬರಲಿದೆ.
ಇದರ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿರುವ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಒತ್ತಾಯಿಸಿ ಡಿಸೆಂಬರ್ 19 ರಿಂದ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.