alex Certify ಸರ್ಕಾರಿ ಬಸ್ ಡಿಕ್ಕಿ: ಸೈಕಲ್ ನಲ್ಲಿದ್ದ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಬಸ್ ಡಿಕ್ಕಿ: ಸೈಕಲ್ ನಲ್ಲಿದ್ದ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಸಾಗರದಿಂದ ಯಲ್ಲಾಪುರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ – ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೆ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ಸಾಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ.

ಬೆಳಲಮಕ್ಕಿ ನಿವಾಸಿ ಗಣೇಶ್ (25) ಮೃತಪಟ್ಟ ದುರ್ದೈವಿ. ಗಣೇಶ ಪಟ್ಟಣದಲ್ಲಿ ಪತ್ರಿಕಾ ವಿತರಕನಾಗಿ ಕಳೆದ 10 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇಂದು ಬೆಳಗಿನ ಜಾವ 5 ಗಂಟೆಗೆ ಪತ್ರಿಕೆ ವಿತರಿಸಲು ಹೋಗುವಾಗ ಬಸ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸೈಕಲ್ ಹಿಂಬದಿಯ ಸವಾರ ರಾಹುಲ್‌ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...