ಬರೇಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬರೇಲಿಯ ಸರ್ಕಾರಿ ಶಾಲೆಯಲ್ಲಿ ಮದರಸಾ ಮಾದರಿಯ ಪ್ರಾರ್ಥನೆಗಳನ್ನು ಪಠಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸ್ಥಳೀಯ ಘಟಕ ಆರೋಪಿಸಿದ ನಂತರ ಪೊಲೀಸರು ಪ್ರಾಂಶುಪಾಲರು ಮತ್ತು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಫರೀದ್‌ಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ವಿನಯ್ ಕುಮಾರ್ ಹೇಳಿದ್ದಾರೆ.
ಶಾಲೆಯ ಪ್ರಾಂಶುಪಾಲ ನಹಿದ್ ಸಿದ್ದಿಕಿ ಮತ್ತು ಶಿಕ್ಷಾ ಮಿತ್ರ (ಶಿಕ್ಷಕ) ವಜೀರುದ್ದೀನ್ ಅವರು ಶಾಲೆಯಲ್ಲಿ ಮದರಸಾ ಮಾದರಿಯ ಪ್ರಾರ್ಥನೆಗಳನ್ನು ಹೇಳುವ ಮೂಲಕ ಹಿಂದೂ ಪ್ರಾಬಲ್ಯವಿರುವ ಪ್ರದೇಶದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ವಿಎಚ್‌ಪಿಯ ಸ್ಥಳೀಯ ಘಟಕದ ಕೆಲವು ಸದಸ್ಯರು ಆರೋಪಿಸಿದ್ದಾರೆ.
ಆರೋಪಿಗಳು ವಿದ್ಯಾರ್ಥಿಗಳನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಎಚ್‌ಪಿ ಸದಸ್ಯರು ಆರೋಪಿಸಿದ್ದಾರೆ. ಘಟನೆಯ ವಿಡಿಯೋ ಕೂಡ ಬಯಲಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.