ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದರ ಮಧ್ಯೆ ಇದೀಗ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರಿಗೆ ಮತ್ತೊಂದು ಹೊರೆಯನ್ನು ಹೇರಲು ರಾಜ್ಯ ಸರ್ಕಾರ ಮುಂದಾಗಿದೆ.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಪ್ರಾಥಮಿಕ, ಪ್ರೌಢಶಾಲೆಗಳ ಅಗತ್ಯ ಖರ್ಚು ವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ಪ್ರತಿ ತಿಂಗಳು ನೂರು ರೂಪಾಯಿ ದೇಣಿಗೆ ಸಂಗ್ರಹಿಸಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಆದರೆ ಇದಕ್ಕೆ ಶಿಕ್ಷಣ ತಜ್ಞರಿಂದ ವಿರೋಧ ವ್ಯಕ್ತವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಕೂಲಿ ಕಾರ್ಮಿಕರು, ಬಡವರ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಂತಹ ವಿದ್ಯಾರ್ಥಿಗಳ ಪೋಷಕರು ದಿನನಿತ್ಯದ ಜೀವನ ನಡೆಸಲು ಬವಣೆ ಪಡುತ್ತಿರುವಾಗ ಅವರಿಂದ ಪ್ರತಿ ತಿಂಗಳು ನೂರು ರೂಪಾಯಿಗಳನ್ನು ದೇಣಿಗೆ ರೂಪದಲ್ಲಿ ಪಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ.