
ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.
ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆ ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವಂತೆ ಸೂಚಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.