ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಠೇವಣಿ ಹೊಂದಿದ್ದ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ರಕ್ಷಣೆಗೆ ಧಾವಿಸಿದ್ದ ಕೇಂದ್ರ ಸರ್ಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ ರೂಪಾಯಿಗಳಿಂದ 5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಿತ್ತು.
ಕೆಲ ದಿನಗಳ ಹಿಂದಷ್ಟೇ 5 ಲಕ್ಷ ರೂ. ಪರಿಹಾರ ನೀಡುವ ತಿದ್ದುಪಡಿ ವಿಧೇಯಕಕ್ಕೆ ಸಂಸತ್ತು ಅಂಗೀಕಾರ ನೀಡಿತ್ತು. ಈ ನಿಯಮ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ಭಾವಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಸಹಕಾರ ಬ್ಯಾಂಕುಗಳ ಗ್ರಾಹಕರಿಗೂ ನೆಮ್ಮದಿ ನೀಡಿದೆ.
ವಿಮೆ ಖಾತರಿ, ಸಹಕಾರ ಬ್ಯಾಂಕುಗಳಲ್ಲಿ ಠೇವಣಿ ಹೊಂದಿದವರಿಗೂ ಅನ್ವಯವಾಗಲಿದೆ ಎಂದು ಹೇಳಲಾಗಿದ್ದು, ಎಲ್ಲ ಸಾರ್ವಜನಿಕ ಬ್ಯಾಂಕುಗಳು, ಖಾಸಗಿ ಬ್ಯಾಂಕುಗಳು, ವಿದೇಶಿ ಬ್ಯಾಂಕುಗಳು, ನಗರ ಸಹಕಾರ ಬ್ಯಾಂಕುಗಳು, ಸಹಕಾರ ಬ್ಯಾಂಕುಗಳು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಕಾರ ಸೊಸೈಟಿ ರಿಜಿಸ್ಟರ್ ಅಡಿಯಲ್ಲಿ ನೋಂದಾಯಿತ ಬ್ಯಾಂಕುಗಳು ಈ ನಿಯಮದಡಿ ಬರಲಿವೆ ಎಂದು ಹೇಳಲಾಗಿದೆ.