ಸಹಕಾರ ವಿಷಯದಲ್ಲಿ ಡಿಪ್ಲೋಮಾ ಶಿಕ್ಷಣ ಪಡೆದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಈ ಗುಡ್ ಗುಡ್ ನ್ಯೂಸ್ ನೀಡಿದ್ದಾರೆ.
ರಾಜ್ಯ ಸಹಕಾರ ಮಂಡಳದ ವತಿಯಿಂದ ಆಯೋಜಿಸಲಾಗಿದ್ದ ನೂರನೇ ಅಂತರಾಷ್ಟ್ರೀಯ ಸಹಕಾರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ವಿಷಯದಲ್ಲಿ ಡಿಪ್ಲೋಮೋ ಶಿಕ್ಷಣ ಪಡೆದವರಿಗೆ ಸಹಕಾರ ಸಂಸ್ಥೆಗಳ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎಂದು ಹೇಳಿದ್ದಾರೆ.
ಕೃಷಿ ಪತ್ತಿನ ಸಹಕಾರ ಸಂಘಗಳ ವಹಿವಾಟನ್ನು ಸಂಪೂರ್ಣ ಕಂಪ್ಯೂಟರಿಕರಣ ಮಾಡುವ ಯೋಜನೆಗೆ ಕೇಂದ್ರ ಸರ್ಕಾರ 2,500 ಕೋಟಿ ರೂಪಾಯಿಗಳ ನೆರವು ನೀಡಲು ಒಪ್ಪಿಕೊಂಡಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಇದೆ ಸಂದರ್ಭದಲ್ಲಿ ತಿಳಿಸಿದರು.