alex Certify ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.

1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅಲ್ಲದೆ ಪರೀಕ್ಷೆ ಅಂಕಗಳ ಆಧಾರದ ಮೇಲೆ 26 ವಿಷಯಗಳ ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿಯನ್ನು ಮೀಸಲಾತಿಗೆ ಅನುಗುಣವಾಗಿ ಪ್ರಕಟ ಮಾಡಲಾಗಿದೆ.

ನವೆಂಬರ್ 9ರಂದು ದಾಖಲೆಗಳ ಪರಿಶೀಲನೆ ಆರಂಭವಾಗಲಿದ್ದು, ಈ ಪ್ರಕ್ರಿಯೆ ನವೆಂಬರ್ 21ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಮೂಲ ದಾಖಲೆಗಳೊಂದಿಗೆ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಹಾಜರಾಗಬೇಕಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...