alex Certify ಸಹೋದರಿ ಮೇಲೆಯೇ ನಿರಂತರ ಅತ್ಯಾಚಾರಗೈದ ಕೀಚಕನಿಗೆ 20 ವರ್ಷ ಜೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರಿ ಮೇಲೆಯೇ ನಿರಂತರ ಅತ್ಯಾಚಾರಗೈದ ಕೀಚಕನಿಗೆ 20 ವರ್ಷ ಜೈಲು

ತನ್ನ ಸ್ವಂತ ಅಪ್ರಾಪ್ತ ಸಹೋದರಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಸ್ಸಾಂನ ಮೋರಿಗಾಂವ್​​ ಜಿಲ್ಲೆಯ ಪೋಕ್ಸೋ ನ್ಯಾಯಾಲಯವು 23 ವರ್ಷದ ಯುವಕನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಸಹೋದರನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯು ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.

ಸಂತ್ರಸ್ತೆಯು 16 ವರ್ಷ ಪ್ರಾಯದವಳಾಗಿದ್ದು ತನಗಾದ ಅನುಭವದ ಬಗ್ಗೆ ಅಕ್ಕನಿಗೆ ಮಾಹಿತಿ ನೀಡಿದ್ದಳು. ಈ ವೇಳೆ ಅಕ್ಕ ಅಪ್ರಾಪ್ತೆಯನ್ನು ವೈದ್ಯರ ಬಳಿಗೆ ಕರೆದೊಯ್ದಳು.

ಈ ವೇಳೆ ಬಾಲಕಿ ಗರ್ಭಿಣಿ ಎಂಬ ವಿಚಾರ ತಿಳಿದು ಬಂದಿದೆ. ಇದಾದ ಬಳಿಕ 2019ರ ಜುಲೈ 13ರಂದು ಸಂತ್ರಸ್ತೆಯು ಪೊಲೀಸ್​ ಠಾಣೆಯಲ್ಲಿ ಸಹೋದರನ ವಿರುದ್ಧ ದೂರು ದಾಖಲಿಸಿದಳು.

ದೂರಿನ ಆಧಾರದ ಮೇಲೆ ಪೊಲೀಸರು ಜಾಗಿರೋಡ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡರು.

ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ ಬಳಿಕ ಆಕೆಯು ಗರ್ಭಿಣಿ ಎಂಬುದು ಸಾಬೀತಾಗಿದೆ. ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...