alex Certify ಸಾರಾ ಮಹೇಶ್ – ಜಿಟಿಡಿ ಭೇಟಿ; ಕುತೂಹಲ ಕೆರಳಿಸಿದ ಉಭಯ ಮುಖಂಡರ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಾ ಮಹೇಶ್ – ಜಿಟಿಡಿ ಭೇಟಿ; ಕುತೂಹಲ ಕೆರಳಿಸಿದ ಉಭಯ ಮುಖಂಡರ ನಡೆ

ಜೆಡಿಎಸ್ ನಾಯಕರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಪಕ್ಷ ತೊರೆದು ಕಾಂಗ್ರೆಸ್ ಅಥವಾ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಜೆಡಿಎಸ್ ಮುಖಂಡ ಸಾರಾ ಮಹೇಶ್, ಜಿ.ಟಿ.ಡಿ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಭಾನುವಾರದಂದು ಮೈಸೂರಿನ ‘ಜಲದರ್ಶಿನಿ’ ಅತಿಥಿ ಗೃಹದಲ್ಲಿ ಈ ಇಬ್ಬರು ನಾಯಕರು ಭೇಟಿಯಾಗಿದ್ದು, ಇತರೆ ಮುಖಂಡರನ್ನು ಹೊರ ಕಳುಹಿಸಿ ಇಬ್ಬರೇ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್ ವರಿಷ್ಠರ ಸಂದೇಶದಂತೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಜಿ.ಟಿ. ದೇವೇಗೌಡರಿಗೆ ಹಾಗೂ ಹುಣಸೂರು ಕ್ಷೇತ್ರದಿಂದ ಜಿ.ಟಿ. ದೇವೇಗೌಡ ಅವರ ಪುತ್ರ ಜಿ.ಡಿ. ಹರೀಶ್ ಗೌಡ ಅವರಿಗೆ ಟಿಕೆಟ್ ನೀಡುವ ಭರವಸೆಯನ್ನು ಸಾರಾ ಮಹೇಶ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...