ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಜಾರಿಗೆ ತಂದಿರುವ ಬೆನ್ನಲ್ಲೇ ನಾಲ್ಕು ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳಿಗೆ ಇನ್ಮುಂದೆ ಅನುದಾನ ನೀಡದಿರಲು ತೀರ್ಮಾನಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಈ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ದಿ, ಈ ಹಿಂದೆ ರಾಜ್ಯ ಸರ್ಕಾರ ಸಾರಿಗೆ ನಿಗಮಕ್ಕೆ ಹಣ ನೀಡುತ್ತಿರಲಿಲ್ಲ. ನಿಗಮಗಳ ಆದಾಯದಲ್ಲಿಯೇ ವೇತನ, ಇಂಧನಕ್ಕೆ ಹಣ ಹೊಂದಿಸಿಕೊಳ್ಳುತ್ತಿದ್ದರು. ಎರಡು ವರ್ಷಗಳ ಕೊರೊನಾ ಸಂದರ್ಭದಲ್ಲಿ ಸರ್ಕಾರ ಸಾರಿಗೆ ನಿಗಮಗಳ ಸಹಾಯಕ್ಕೆ ಬಂದಿತ್ತು. ಈಗ ಕೊರೊನಾ ಇಲ್ಲದ ಕಾರಣ ಆರ್ಥಿಕ ಇಲಾಖೆ ಈ ಆದೇಶ ಹೊರಡಿಸಿರಬಹುದು ಎಂದು ತಿಳಿಸಿದ್ದಾರೆ.