ಪ್ರತಿ ತಿಂಗಳು ಸಕಾಲಕ್ಕೆ ವೇತನವಾಗದೆ ಬೇಸತ್ತಿರುವ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಖುಷಿ ಸುದ್ದಿಯೊಂದು ಇಲ್ಲಿದೆ.
ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು, ಸಿಬ್ಬಂದಿಯ ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜೊತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಅಲ್ಲದೆ ಪ್ರತಿ ತಿಂಗಳು ಸಕಾಲಕ್ಕೆ ವೇತನ ಆಗದಿರುವುದು ಸಹ ತಮ್ಮ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.