ಉತ್ತರ ಪ್ರದೇಶದ ಪ್ರತಾಪ್ಗಢ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದ ಒಳಗೆ 20 ವರ್ಷದ ವಿವಾಹಿತೆ ಮೇಲೆ ಅತ್ಯಾಚಾರವರೆಸಗಿದ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಭವಿಸುವ ವೇಳೆಯಲ್ಲಿ ಮಹಿಳೆಯು ತನ್ನ ಪತಿಯೊಂದಿಗೆ ರೈಲಿಗಾಗಿ ಕಾಯುತ್ತಿದ್ದಳು ಎಂದು ಕೋತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆರ್.ಎನ್ ರೈ ಹೇಳಿದ್ದಾರೆ.
ಚಹಾ ತರಲೆಂದು ಪತಿಯು ತನ್ನ ಪತ್ನಿಯನ್ನು ನಿಲ್ದಾಣದಲ್ಲಿ ಒಂಟಿಯಾಗಿ ಬಿಟ್ಟು ತೆರಳಿದ್ದ ಎನ್ನಲಾಗಿದೆ. ಅಣ್ಣಾ ಎಂಬ ಹೆಸರಿನ ವ್ಯಕ್ತಿಯೊಬ್ಬ ಮಹಿಳೆಯ ಕೈಗೆ ಕೀಲಿಯನ್ನು ನೀಡಿ ಈ ಶೌಚಾಲಯ ಸ್ವಚ್ಛವಾಗಿದ್ದು ಇದನ್ನು ಬಳಕೆ ಮಾಡಬಹುದು ಎಂದು ಹೇಳಿದ್ದಾನೆ. ಮಹಿಳೆಯು ಶೌಚಾಲಯಕ್ಕೆ ತೆರಳುತ್ತಿದ್ದಂತೆಯೇ ಆಕೆಯ ಮೇಲೆ ಆತ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
ಕೃತ್ಯ ಎಸಗಿದ ಬಳಿಕ ಆರೋಪಿಯು ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಪತಿಯು ಮಹಿಳೆಯನ್ನು ರಕ್ಷಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.