alex Certify ಸಾರ್ವಜನಿಕ ಶೌಚಾಲಯದಲ್ಲೇ ವಿವಾಹಿತೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ಶೌಚಾಲಯದಲ್ಲೇ ವಿವಾಹಿತೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ….!

ಉತ್ತರ ಪ್ರದೇಶದ ಪ್ರತಾಪ್​ಗಢ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಸ್ಟ್ಯಾಂಡ್​ ಬಳಿ ಇರುವ ಸಾರ್ವಜನಿಕ ಶೌಚಾಲಯದ ಒಳಗೆ 20 ವರ್ಷದ ವಿವಾಹಿತೆ ಮೇಲೆ ಅತ್ಯಾಚಾರವರೆಸಗಿದ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಸಂಭವಿಸುವ ವೇಳೆಯಲ್ಲಿ ಮಹಿಳೆಯು ತನ್ನ ಪತಿಯೊಂದಿಗೆ ರೈಲಿಗಾಗಿ ಕಾಯುತ್ತಿದ್ದಳು ಎಂದು ಕೋತ್ವಾಲಿ ಪೊಲೀಸ್​ ಠಾಣೆಯ ಸ್ಟೇಷನ್​ ಹೌಸ್​ ಆಫೀಸರ್​​ ಆರ್​.ಎನ್​ ರೈ ಹೇಳಿದ್ದಾರೆ.

ಚಹಾ ತರಲೆಂದು ಪತಿಯು ತನ್ನ ಪತ್ನಿಯನ್ನು ನಿಲ್ದಾಣದಲ್ಲಿ ಒಂಟಿಯಾಗಿ ಬಿಟ್ಟು ತೆರಳಿದ್ದ ಎನ್ನಲಾಗಿದೆ. ಅಣ್ಣಾ ಎಂಬ ಹೆಸರಿನ ವ್ಯಕ್ತಿಯೊಬ್ಬ ಮಹಿಳೆಯ ಕೈಗೆ ಕೀಲಿಯನ್ನು ನೀಡಿ ಈ ಶೌಚಾಲಯ ಸ್ವಚ್ಛವಾಗಿದ್ದು ಇದನ್ನು ಬಳಕೆ ಮಾಡಬಹುದು ಎಂದು ಹೇಳಿದ್ದಾನೆ. ಮಹಿಳೆಯು ಶೌಚಾಲಯಕ್ಕೆ ತೆರಳುತ್ತಿದ್ದಂತೆಯೇ ಆಕೆಯ ಮೇಲೆ ಆತ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.

ಕೃತ್ಯ ಎಸಗಿದ ಬಳಿಕ ಆರೋಪಿಯು ಸ್ಥಳದಿಂದ ಎಸ್ಕೇಪ್​ ಆಗಿದ್ದಾನೆ. ಪತಿಯು ಮಹಿಳೆಯನ್ನು ರಕ್ಷಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...