ಸಾವರ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ತೆರವುಗೊಳಿಸಿದ್ದರ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೀಗಾಗಿ ಅಲ್ಲಿ 144 ನೇ ಸೆಕ್ಷನ್ ಜಾರಿಗೊಳಿಸಲಾಗಿದೆ. ಅಲ್ಲದೇ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಸಾವರ್ಕರ್ ಫೋಟೋ ಹಾಕಬೇಡಿ ಎನ್ನಲು ಅವರ್ಯಾರ್ರೀ ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಸಾವರ್ಕರ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. ಸಿದ್ದರಾಮಯ್ಯನವರು ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸುವುದನ್ನು ಬಿಟ್ಟು ಕುಮ್ಮಕ್ಕು ನೀಡುವ ಮಾತುಗಳನ್ನಾಡುತ್ತಿದ್ದಾರೆ ಎಂದರು.
ಮುಸ್ಲಿಂ ಏರಿಯಾ ಭಾರತದಲ್ಲಿಲ್ಲವೇ ಎಂದು ಕೇಳಿದ ಅರಗ ಜ್ಞಾನೇಂದ್ರ, ಕಿಡಿಗೇಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದು ಖಚಿತ. ಪ್ರೇಮ್ ಸಿಂಗ್ ಎಂಬಾತನಿಗೆ ಇರಿದವರನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೇ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ದುಷ್ಕರ್ಮಿಗಳ ಹೆಡೆಮುರಿ ಕಟ್ಟಲಿದ್ದಾರೆ ಎಂದು ತಿಳಿಸಿದರು.