ಸಾವಿನ ನೋವಿನಲ್ಲೂ ಕುಟುಂಬವೊಂದು ಸಾರ್ಥಕತೆ ಮೆರೆದಿದೆ. ಮೃತ ಮಹಿಳೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಈ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದ್ದು, ಉಕ್ಕುಂದ ವ್ಯಾಪ್ತಿಯ ರತ್ನಾಪುರ ಗ್ರಾಮದ ನಿವಾಸಿ 55 ವರ್ಷದ ಗಂಗಮ್ಮ ಎಂಬವರು ತಮ್ಮ ಪುತ್ರನೊಂದಿಗೆ ಬೈಕಿನಲ್ಲಿ ಹೋಗುವಾಗ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದರು. ಇದೀಗ ಅವರ ಕುಟುಂಬ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದೆ.