alex Certify ಸಾಹಿತ್ಯ ಲೋಕದ ಕಣ್ಮಣಿ ಆಲೂರು ವೆಂಕಟರಾಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತ್ಯ ಲೋಕದ ಕಣ್ಮಣಿ ಆಲೂರು ವೆಂಕಟರಾಯರು

ಕನ್ನಡ ಭಾಷೆ, ಸಂಸ್ಕೃತಿ ಶ್ರೀಮಂತವಾಗಿರೋದು. ಕನ್ನಡಕ್ಕೆ ಹಾಗೂ ಸಾಹಿತ್ಯ ಲೋಕಕ್ಕೆ ಅನೇಕರು ನೀಡಿರುವ ಕೊಡುಗೆ ಅಪಾರವಾದದ್ದು. ಅದರಲ್ಲಿ ಆಲೂರು ವೆಂಕಟರಾಯರು ಕೂಡ ಒಬ್ಬರು. ಆಲೂರು ವೆಂಕಟರಾಯರು 1880 ಜುಲೈ 12 ರಂದು ವಿಜಯಪುರದಲ್ಲಿ ಜನಿಸಿದರು. ಇವರ ವಂಶಜರು ಧಾರವಾಡದ ಬಳಿಯ ಆಲೂರು ಅಂದರೆ ಈಗಿನ ಗದಗ ಜಿಲ್ಲೆ, ರೋಣ ತಾಲ್ಲೂಕಿನ ಹೊಳೆ-ಆಲೂರಲ್ಲಿ ಬಂದು ನೆಲೆಸಿದ್ದರು. ಹೀಗಾಗಿ ಇವರಿಗೆ ಆಲೂರು ಮನೆತನದವರು ಎಂದು ಹೆಸರಾಯಿತು. ಇವರ ತಂದೆ ಭೀಮರಾಯರು, ತಾಯಿ ಭಾಗೀರಥಮ್ಮ.

ವೆಂಕಟರಾಯರು ಆರಂಭದ ಶಿಕ್ಷಣವನ್ನು ಧಾರವಾಡದಲ್ಲಿ ಮುಗಿಸಿದರು. ಪುಣೆಯ ಫರ್ಗ್ಯೂಸನ್ ಕಾಲೇಜಿನಿಂದ 1903 ರಲ್ಲಿ ಬಿ.ಎ. ಪದವಿ ಪಡೆದು, 1905ರಲ್ಲಿ ಮುಂಬಯಿಯಲ್ಲಿ ಎಲ್.ಎಲ್.ಬಿ. ಪದವಿಯನ್ನು ಪಡೆದರು. ನಂತರ ಧಾರವಾಡಕ್ಕೆ ವಾಪಸ್ ಆದರು. ನಂತರ ಹಂಪಿಗೆ ಭೇಟಿ ನೀಡಿದ ನಂತರ ಅವರ ಮನಸ್ಸು ಬದಲಾಗಿದ್ದು ಇದರಿಂದಾಗಿ ಆಲೂರರು ಕರ್ನಾಟಕದ ಇತಿಹಾಸ, ಸಾಹಿತ್ಯಗಳ ವ್ಯಾಸಂಗಕ್ಕೆ ತೊಡಗಿದರು.

ಕನ್ನಡಿಗರನ್ನು ಜಾಗೃತಗೊಳಿಸಲು ವೆಂಕಟರಾಯರು 1906 ರಲ್ಲಿ ವಾಗ್ಭೂಷಣ ಎಂಬ ಪತ್ರಿಕೆ ಆರಂಭಿಸಿದರು. ವಕೀಲಿ ವೃತ್ತಿಯನ್ನು ತೊರೆದು ಸ್ವದೇಶಿ ಚಳುವಳಿಯಲ್ಲಿ ಭಾಗವಹಿಸಿದರು. 1922 ರ ನವೆಂಬರ್ 4 ರಂದು ಜಯಕರ್ನಾಟಕ ಪತ್ರಿಕೆಯನ್ನು ಪ್ರಾರಂಭಿಸಿದರು. 1921 ರಲ್ಲಿ ಮಹಾತ್ಮ ಗಾಂಧಿಯವರು ಆರಂಭಿಸಿದ ಸತ್ಯಾಗ್ರಹ ಚಳುವಳಿಯಲ್ಲಿ ಭಾಗವಹಿಸಿದ್ದರು.

ಆಲೂರು ವೆಂಕಟರಾಯರು ಸುಮಾರು ಇಪ್ಪತ್ತೈದು ಕೃತಿಗಳನ್ನು ಬರೆದಿದ್ದಾರೆ. ಶ್ರೀ ವಿದ್ಯಾರಣ್ಯ ಚರಿತ್ರೆ , ಕರ್ನಾಟಕ ಗತವೈಭವ, ಕರ್ನಾಟಕ ವೀರರತ್ನಗಳು, ಶಿಕ್ಷಣ ಮೀಮಾಂಸೆ, ರಾಷ್ಟ್ರೀಯತ್ವದ ಮೀಮಾಂಸೆ, ಕನ್ನಡಿಗರ ಭ್ರಮನಿರಸನ, ಕರ್ನಾಟಕತ್ವದ ವಿಕಾಸ, ಕರ್ನಾಟಕತ್ವದ ಸೂತ್ರಗಳು, ಸ್ವಾತಂತ್ರ್ಯಸಂಗ್ರಾಮ, ಗೀತಾಪ್ರಕಾಶ, ಗೀತಾಸಂದೇಶ, ಗೀತಾಪರಿಮಳ, ಗೀತಾಭಾವ ಪ್ರದೀಪ, ಶ್ರೀ ಮಧ್ವಾಚಾರ್ಯರ ಮೂಲ ಸಿದ್ಧಾಂತ, ಶ್ರೀ ಮಧ್ವಾಚಾರ್ಯರ ಪೂರ್ಣ ಬ್ರಹ್ಮವಾದ. ಆತ್ಮಕಥನ – ನನ್ನ ಜೀವನ ಸ್ಮೃತಿಗಳು ಎಂಬ ಹೆಸರಿನಲ್ಲಿ ಎರಡು ಭಾಗಗಳಲ್ಲಿ ಪ್ರಕಟಿಸಿದ್ದಾರೆ. ಲೋಕಮಾನ್ಯ ತಿಲಕರ ಗೀತಾ ರಹಸ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಲೂರು ವೆಂಕಟರಾಯರು 1930 ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕನ್ನಡದ ಜನತೆ ಇವರಿಗೆ ದೇಶಸೇವಾಧುರೀಣ , ಸ್ವಭಾಷಾರಕ್ಷಕ ಎಂದು ಕರೆದು ಸನ್ಮಾನಿಸಿದೆ. ಇನ್ನು ಕನ್ನಡಕ್ಕಾಗಿ ಕಾಯಕಲ್ಪ ರೂಪಿಸಿದವರು ವೆಂಕಟರಾಯರು.

ಇನ್ನೂ ಕರ್ನಾಟಕಕ್ಕಾಗಿ ಹೇಗೆ ಹೋರಾಟ ಮಾಡಿದರೋ ಅದೇ ರೀತಿಯಲ್ಲಿ ರಾಷ್ಟ್ರೀಯತ್ವಕ್ಕಾಗಿ ಹೋರಾಡಿದವರು ವೆಂಕಟರಾಯರು. 1928 ರಲ್ಲಿ ಅವರು ರಾಷ್ಟ್ರೀಯ ಮೀಮಾಂಸೆ ಎಂಬ ಒಂದು ಕಿರುಹೊತ್ತಗೆಯನ್ನು ಬರೆದು ಪ್ರಕಟಿಸಿದರು. ಹೀಗೆ ಅನೇಕ ಕೊಡುಗೆಗಳನ್ನು ಕೊಟ್ಟು ತಮ್ಮದೇ ಆದ ಸಾಧನೆ ಮಾಡಿದ್ದಾರೆ ಆಲೂರುರವರು. ಇವರು ಫೆಬ್ರವರಿ 25, 1964 ಧಾರವಾಡದಲ್ಲಿ ಇಹಲೋಕ ತ್ಯಜಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...