ಸಿಂಧೂರ ಆಗಲಿ ಅಥವಾ ಹಿಜಾಬ್ ಆಗಲಿ ಎರಡೂ ಸಹ ನಮ್ಮ ಸಂಸ್ಕೃತಿ ಮತ್ತು ನಂಬಿಕೆಯಾಗಿದೆ. ಹೀಗಾಗಿ ಯಾವುದೇ ಸಂಸ್ಕೃತಿಯನ್ನು ಬಲವಂತವಾಗಿ ತಡೆಯುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ಅನ್ನು ಈ ಹಿಂದಿನಿಂದಲೂ ಧರಿಸಿಕೊಂಡು ಬರುತ್ತಿದ್ದರು. ಆದರೆ ಕೇಸರಿ ಶಾಲನ್ನು ಯಾರೂ ಹಾಕಿಕೊಂಡು ಬರುತ್ತಿರಲಿಲ್ಲ. ಆದರೆ ಹಿಜಾಬ್ ವಿರೋಧಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿಸುವುದು ಸಣ್ಣತನ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಿಜೆಪಿಯವರಿಗೆ ರಾಷ್ಟ್ರ ಧ್ವಜದ ಮೇಲೆ ಯಾವುದೇ ಗೌರವವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರ ಧ್ವಜ ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ ಹಾಗೂ ಭಕ್ತಿ ಇರುತ್ತಿತ್ತು ಎಂದು ಹೇಳಿದರು.