alex Certify ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗದಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗದಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ: ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಇಂದು ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಮಕ್ಕಳೊಂದಿಗೆ ವಿಶೇಷವಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.

ಈ ಶಾಲೆಯ ಒಟ್ಟು 80 ಮಕ್ಕಳಿದ್ದು, ಅದರಲ್ಲಿ 15 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಹುಟ್ಟುಹಬ್ಬ ಸಂದರ್ಭದಲ್ಲಿ ಮುಖ್ಯಸ್ಥರಾದ ಮಂಜುನಾಥ್ ಶೆಟ್ಟಿ, ರಾಘವೇಂದ್ರ, ನಾಗರಾಜ್, ಮಂಜುನಾಥ್, ಸುಧೀರ್, ಸಂದೀಪ್, ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಜೂನ್ 10 ರಂದು ವಿಶ್ವಾದ್ಯಂತ ತೆರೆ ಕಾಣುತ್ತಿರುವ ‘777 ಚಾರ್ಲಿ’ ಚಿತ್ರವು ಅತ್ಯಂತ ಯಶಸ್ವಿಯಾಗಿ ಪ್ರದರ್ಶನವಾಗಲೀ ಎಂದು ಅಭಿಮಾನಿ ಬಳಗ ಶುಭ ಹಾರೈಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...