ಬೆಳಗಾವಿ : ಚಳಿಗಾಲದ ಅಧಿವೇಶನ ಆರಂಭವಾಗಿದ್ದೇ ತಡ, ಸಾಲು ಸಾಲು ಪ್ರತಿಭಟನೆಗಳು ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿವೆ. ಇದರ ಮಧ್ಯೆ ವಿದ್ಯಾರ್ಥಿಗಳು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರಿಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದ್ದಾರೆ.
ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಲ್ಯಾಪ್ ಟಾಪ್ ನೀಡಬೇಕೆಂದು ಆಗ್ರಹಿಸಿ ಮನವಿ ಮಾಡಿದ್ದಾರೆ. ತಾಲೂಕಿನ ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದಲ್ಲಿ ನಿರ್ಮಾಣವಾಗುತ್ತಿರುವ ಆರ್ ಸಿ ಯು ಕ್ಯಾಂಪಸ್ ನ ಗುದ್ದಲಿ ಪೂಜೆ ನೆರವೇರಿಸಿ ಆಗಮಿಸುತ್ತಿದ್ದಂತೆ ಕಾರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು, ತಮ್ಮ ಮನವಿಗೆ ಸ್ಪಂದಿಸಿ, ಸಹಾಯ ಮಾಡಬೇಕೆಂದು ಕೇಳಿಕೊಂಡಿದ್ದಾರೆ.
ವಿಮಾನ ಪ್ರಯಾಣಿಕರಿಗೆ ಖುಷಿ ಸುದ್ದಿ: ಕೊರೊನಾ ಲಸಿಕೆ ಪಡೆದವರಿಗೆ ಸಿಗಲಿದೆ ರಿಯಾಯಿತಿ ಟಿಕೆಟ್
ಲ್ಯಾಪ್ ಟಾಪ್ ಕುರಿತು ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲಸಚಿವರಲ್ಲಿ ಮನವಿ ಮಾಡಿದರೆ, ಟಿ ಎಸ್ ಪಿ ಹಾಗೂ ಎಸ್ ಸಿ ಪಿ ಅನುದಾನ ಬಂದಿಲ್ಲ. ಹೀಗಾಗಿ ಲ್ಯಾಪ್ ಟಾಪ್ ಕೊಡಲು ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ. 316 ಜನ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ನಮ್ಮ ಓದಿಗೆ ತೊಂದರೆಯಾಗುತ್ತಿದೆ. ಹೀಗಾಗಿ ನಮಗೆ ಲ್ಯಾಪ್ ಟಾಪ್ ಅವಶ್ಯಕತೆ ಇದ್ದು, ಕೂಡಲೇ ಅನುದಾನ ಬಿಡುಗಡೆ ಮಾಡಿ ಲ್ಯಾಪ್ ಟಾಪ್ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿರುವ ಸಿಎಂ, ಶೀಘ್ರದಲ್ಲಿಯೇ ನಿಮ್ಮ ಬೇಡಿಕೆ ಈಡೇರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.