ಬೆಂಗಳೂರು: ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗಿಳಿಸಲಾಗುತ್ತಿದೆ ಎಂಬ ಬಗ್ಗೆ ನಾನು ಮೊದಲೇ ಹೇಳಿದ್ದೆ. ಆದರೆ ಅಂದು ಯಾರೂ ನಂಬಲಿಲ್ಲ, ಈಗ ಕಾಲ ಸನ್ನಿಹಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಬದಲಾವಣೆಯಿಂದ ಕಾಂಗ್ರೆಸ್ ಗೆ ಲಾಭ-ನಷ್ಟ ಎಂಬುದು ಮುಖ್ಯವಲ್ಲ, ಒಬ್ಬ ಭ್ರಷ್ಟ ಮುಖ್ಯಮಂತ್ರಿ ಹೋಗಬೇಕು ಅಷ್ಟೇ. ಸಿಎಂ ಬಿ ಎಸ್ ವೈ ಹಾಗೂ ಪುತ್ರ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹೀಗಾಗಿ ಬದಲಾವಣೆ ಬಗ್ಗೆ ನನಗೆ ಮೊದಲೇ ಮಾಹಿತಿ ಇತ್ತು. ಯಡಿಯೂರಪ್ಪನವರನ್ನು ತೆಗೆದರೆ ಇನ್ನೊಬ್ಬರು ಸಿಎಂ ಆಗುತ್ತಾರೆ, ಅವಧಿಪೂರ್ವ ಚುನಾವಣೆ ಬರುತ್ತೆ ಎಂದು ಅನ್ನಿಸುತ್ತಿಲ್ಲ ಎಂದಿದ್ದಾರೆ.
BREAKING NEWS: ಯೂನಿಯನ್ ಬ್ಯಾಂಕ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ; ಬ್ಯಾಂಕ್ ಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ
ಇನ್ನು ಡಿ.ಕೆ.ಶಿವಕುಮಾರ್ ಹಾಗೂ ತಮಗೆ ರಾಹುಲ್ ಗಾಂಧಿ ಬುಲಾವ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಾಕೆ ಕರೆದಿದ್ದಾರೆ ಎಂದು ಹೇಳಲು ಆಗುತ್ತಾ, ರಾಹುಲ್ ನಮ್ಮ ವರಿಷ್ಠರು ಕರೆದಿದ್ದಾರೆ ಹೋಗುತ್ತಿದ್ದೇವೆ ಎಂದು ಹೇಳಿದರು.