alex Certify ಸಿಎಂ ಮಾರ್ಗದರ್ಶನದಲ್ಲಿ ‘ಪಠ್ಯಪುಸ್ತಕ ಪರಿಷ್ಕರಣೆ’ ಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಮಾರ್ಗದರ್ಶನದಲ್ಲಿ ‘ಪಠ್ಯಪುಸ್ತಕ ಪರಿಷ್ಕರಣೆ’ ಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉತ್ತರ ಕನ್ನಡ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Textbook Revision) ಮಾಡಿ ಮಕ್ಕಳಿಗೆ ಅವಶ್ಯಕತೆ ಇದ್ದದ್ದನ್ನು ಮಾತ್ರ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ (Minister Madhu Bangarappa) ಹೇಳಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಅವಶ್ಯಕತೆಯಿದೆ. ಮಕ್ಕಳಿಗೆ ಅವಶ್ಯಕತೆ ಇದ್ದದ್ದನ್ನು ಮಾತ್ರ ಹೇಳಿಕೊಡಬೇಕಿದೆ. ತಪ್ಪು ದಾರಿಗೆ ಕೊಂಡೊಯ್ದರೆ ಅವರ ಭವಿಷ್ಯ ಸರಿ ಹೋಗುವುದಿಲ್ಲ. ಕನ್ನಡ ಹಾಗೂ ಸಮಾಜ ವಿಜ್ಞಾನದಲ್ಲಿ ಬದಲಾವಣೆ ಮಾಡಲೇಬೇಕಿದೆ. ಸಿಎಂ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಪರಿಷ್ಕರಣೆ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮುಂದಿನ 2024ರ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕದಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ ಇನ್ನೆರಡು ತಿಂಗಳಲ್ಲಿ ಸಮಿತಿ ರಚನೆ ಮಾಡಿ ಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ನಡೆಸುತ್ತೇವೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...