ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಕಾರ್ಯಸೂಚಿಯ ಸಂಬಂಧ ಶಿವಸೇನೆಯ ಸಂಸದ ಸಂಜಯ್ ರಾವತ್ ಕೆಲಸ ಮಾಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಸ್ಪೋಟಕ ಮಾಹಿತಿ ನೀಡಿದ್ದಾರೆ.
ಮುಂಬೈನಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪಾಟೀಲ್, ನಮಗೆ ತಿಳಿದಿರುವ ಮಾಹಿತಿಯ ಪ್ರಕಾರ ಸಂಜಯ್ ರಾವತ್, ಶರದ್ ಪವಾರ್ ನೀಡಿರುವ ಅಜೆಂಡಾದ ಪ್ರಕಾರ ಕಾರ್ಯನಿರ್ವಹಿಸುತ್ತಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಆಗಿ 2.5 ವರ್ಷಗಳನ್ನು ಪೂರೈಸಿದ್ದಾರೆ. ಹೀಗಾಗಿ ಇದೀಗ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಸುಪ್ರಿಯಾ ಸುಳೆಯನ್ನು ನೇರವಾಗಿ ಸಿಎಂ ಮಾಡಲು ಸಾಧ್ಯವಿಲ್ಲದ ಕಾರಣ ಸಂಜಯ್ ರಾವತ್ರನ್ನು ಸಿಎಂ ಆಗಿ ಮಾಡಲಾಗುತ್ತದೆ. ಇದೊಂದು ರೀತಿಯಲ್ಲಿ ಸುಳೆಯವರೇ ಸಿಎಂ ಆದಂತೆ ಎಂದು ಹೇಳಿದರು.
ಲೋಕಸಭಾ ಸಂಸದೆ ಹಾಗೂ ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಶರದ್ ಪವಾರ್ರ ಪುತ್ರಿ. ಚಳಿಗಾಲದ ಅಧಿವೇಶನದ ಮೊದಲ ದಿನದಂದು ಆರೋಗ್ಯ ಸಮಸ್ಯೆಗಳಿಂದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿಧಾನಸಭೆಗೆ ಗೈರಾದ ಬಳಿಕ ಪಾಟೀಲ್, ಉದ್ಧವ್ ಠಾಕ್ರೆ ಚೇತರಿಸಿಕೊಳ್ಳುವವರೆಗೆ ತಮ್ಮ ಅಧಿಕಾರವನ್ನು ಬೇರೆಯವರಿಗೆ ನೀಡುವುದು ಒಳಿತು ಎಂದು ಹೇಳಿದ್ದರು.