alex Certify ಸಿದ್ದರಾಮಯ್ಯಗೆ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ; ವಿಪಕ್ಷ ನಾಯಕನ ವಿರುದ್ಧ ಆರ್.ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯಗೆ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ; ವಿಪಕ್ಷ ನಾಯಕನ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಅವರಿಗೆ ತಾನು ಮಾಡಿದ್ದೇ ಸರಿ ಎಂಬ ಭಾವನೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂಬ ಅಹಂ. ಹಾಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಸರ್ಕಾರ ಏನೂ ಸಾಧನೆ ಮಾಡಿಲ್ಲ ಎಂದು ಆರೋಪಿಸುತ್ತಿದ್ದಾರೆ ಎಂದು ಗುಡುಗಿದರು.

ಕೇವಲ ಆರು ತಿಂಗಳಲ್ಲಿ ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ 5 ವರ್ಷ ಆಡಳಿತ ನಡೆಸಿದರು ಏನೂ ಕೆಲಸ ಮಾಡಿಲ್ಲ. ಇದೇ ಕಾರಣಕ್ಕೆ ಜನರು ಸಿದ್ದರಾಮಯ್ಯ ಅವರನ್ನು, ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ ಶೋ ನಡೆಯುತ್ತಿದೆ. ಹೋಟೆಲ್ ಮುಂದೆ ಟುಡೇ ಸ್ಪೆಷಲ್ ಬೋರ್ಡ್ ಇರುವಂತೆ ಇಬ್ಬರ ನಡುವೆ ಟುಡೇ ಸ್ಪೆಷಲ್ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...