ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯವಾಗಿ ಮುಗಿಸಲು ನೀವು ಎಷ್ಟು ಹಣ ಸಂದಾಯ ಮಾಡಿಸಿಕೊಂಡಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು.
ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎಂದು ಪದೇ ಪದೇ ಹೇಳುತ್ತೀರಿ. ಆದರೆ ಸಿದ್ಧವನದಲ್ಲಿ ಕುಳಿತುಕೊಂಡು ನೀವು ಷಡ್ಯಂತ್ರ ಮಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದಿರಿ ಎಂದು ಕುಮಾರಸ್ವಾಮಿ ಆರೋಪಿಸಿದರು.
ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಸ್ವತಂತ್ರವಾಗಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಶಕ್ತಿಯನ್ನು ಕಾರ್ಯಕರ್ತರು ಇಟ್ಟುಕೊಂಡಿದ್ದಾರೆ ಎಂದು ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.