
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರು ಇದುವರೆಗೆ ಹೇಳಿರುವುದು ಯಾವುದೂ ಸತ್ಯವಾಗಿಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದರು. ಆದರೆ ಇಬ್ಬರೂ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದರು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರು ಭ್ರಮೆಯಲ್ಲೇ ಇರಲಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.