ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರೂ ಪ್ರಮುಖ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್) ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಈ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮೂರನೇ ತಲೆಮಾರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗುತ್ತಿದೆ.
ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಈಗಾಗಲೇ ರಾಜಕೀಯ ಪ್ರವೇಶಿಸಿದ್ದು, ವರುಣಾ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ತಮ್ಮ ತಂದೆ ಸಿದ್ದರಾಮಯ್ಯನವರಿಗೆ ಬಿಟ್ಟು ಕೊಟ್ಟಿರುವ ಯತೀಂದ್ರ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.
ಇದರ ಮಧ್ಯೆ ಸಿದ್ದರಾಮಯ್ಯನವರ ಮತ್ತೊಬ್ಬ ಪುತ್ರ ದಿವಂಗತ ರಾಕೇಶ್ ಅವರ ಮಗ 17 ವರ್ಷದ ಧವನ್ ರಾಕೇಶ್ ತಮ್ಮ ತಾತನ ಜೊತೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಮುಂಬರುವ ದಿನಗಳಲ್ಲಿ ರಾಜಕೀಯ ಪ್ರವೇಶಿಸಲಿದ್ದಾರಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ.