ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಕ್ಷಣಗಣನೆ; ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸದಸ್ಯರೂ ಕೂಡ ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ.

2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಇದೇ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಇದಕ್ಕೆ ಆಗಮಿಸಿದ್ದರು. ಈ ಬಾರಿ ಇದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸಾಗರ ಹರಿದು ಬರುವ ಸಾಧ್ಯತೆ ಇರುವುದರಿಂದ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಿವಾಸ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಿಂದ ತುಂಬಿ ತುಳುಕುತ್ತಿದ್ದು, ಇದರ ಜೊತೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಉನ್ನತ ಅಧಿಕಾರಿಗಳು ಗುರುವಾರ ರಾತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಶುಭ ಕೋರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read