alex Certify ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ಸಚಿವ ಶ್ರೀರಾಮುಲು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ಸಚಿವ ಶ್ರೀರಾಮುಲು…!

ವಿಧಾನಸಭಾ ಚುನಾವಣೆಗೆ ಇನ್ನು ಹಲವು ತಿಂಗಳುಗಳು ಇರುವಂತೆಯೇ ಕಾಂಗ್ರೆಸ್ ನ ಕೆಲ ಶಾಸಕರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣರಾಗಿದ್ದರು. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಕೇಂದ್ರ ನಾಯಕರು ಈ ರೀತಿ ಯಾವುದೇ ಹೇಳಿಕೆ ನೀಡದಂತೆ ತಾಕೀತು ಮಾಡಿದ ಬಳಿಕ ಇದಕ್ಕೆ ಕಡಿವಾಣ ಬಿದ್ದಿದೆ.

ಇದರ ಮಧ್ಯೆ ಬಿಜೆಪಿ ಸಚಿವರೊಬ್ಬರು, ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮ ಒಂದರ ವೇಳೆ ಸಚಿವ ಶ್ರೀರಾಮುಲು ಈ ಹೇಳಿಕೆ ನೀಡಿದ್ದಾರೆ.

ಕುರುಬ ಸಂಘದ ವಾಣಿಜ್ಯ ಮಳಿಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು, ಹಿಂದುಳಿದವರ ಅಭಿವೃದ್ಧಿ ವಿಚಾರಕ್ಕೆ ಬಂದರೆ ನಾನು ಹಾಗೂ ಸಿದ್ದರಾಮಯ್ಯನವರು ಒಂದೇ. ಭಗವಂತ ಆಶೀರ್ವಾದ ಮಾಡಿದರೆ ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿ ಎಂದು ನಾನೂ ಸಹ ಆಸೆ ಪಡುತ್ತೇನೆ ಎಂದು ಹೇಳಿದರು. ಅಲ್ಲದೆ ವೈಯಕ್ತಿಕವಾಗಿ ನನಗೂ ಹಾಗೂ ಸಿದ್ದರಾಮಯ್ಯನವರ ಮಧ್ಯೆ ಏನೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...