ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತೊಂದು ಕೊಲೆ ನಡೆದಿರುವುದು ಅವರಿಗೆ ಮಂಗಳಾರತಿ ಮಾಡಿದಂತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವುದಕ್ಕೆ ಸಿಎಂ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಹೇಳಿದ್ದೆಲ್ಲ ವೇದವಾಕ್ಯವಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಲು ಸರ್ಕಾರ ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ.
ಏನು ಕ್ರಮ ಕೈಗೊಳ್ಳಲಿದ್ದೇವೆ ಎಂಬುದನ್ನು ಈಗ ಹೇಳಲಾಗುವುದಿಲ್ಲ. ಆದರೆ ಇದು ಇನ್ನು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. ಯಾವುದೇ ಸಚಿವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.