
ಸಿದ್ದರಾಮಯ್ಯನವರ 75ನೇ ಹುಟ್ಟು ಹಬ್ಬದ ಅಂಗವಾಗಿ ನಾಳೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6.50 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಇದಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.
ಬಿಜೆಪಿ – ಜೆಡಿಎಸ್ ನ ಮುಂಚೂಣಿ ನಾಯಕರು ನಾಳೆ ನಡೆಯಲಿರುವ ‘ಸಿದ್ದರಾಮೋತ್ಸವ’ ಕ್ಕೆ ವ್ಯಂಗ್ಯ ಮಾಡುತ್ತಿದ್ದರೂ ಸಹ ಈ ಎರಡು ಪಕ್ಷಗಳ ಕೆಲ ಶಾಸಕರು ನಾಳಿನ ಸಮಾವೇಶಕ್ಕೆ ಹಾಜರಾಗಲು ತಮ್ಮ ತಮ್ಮ ಕ್ಷೇತ್ರಗಳಲ್ಲಿನ ಜನತೆಗೆ ಬಸ್ ಗಳ ವ್ಯವಸ್ಥೆ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ.
ಕೆಲವೊಬ್ಬ ಶಾಸಕರುಗಳು ಬಹಿರಂಗವಾಗಿಯೇ ಈ ಕೆಲಸ ಮಾಡುತ್ತಿದ್ದರೆ, ಮತ್ತೆ ಕೆಲವರು ತಮ್ಮ ಆಪ್ತ ಬೆಂಬಲಗರ ಮೂಲಕ ಈ ವ್ಯವಸ್ಥೆ ಮಾಡುತ್ತಿದ್ದಾರೆ. ನಾಳಿನ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಪಕ್ಷಾತೀತವಾಗಿ ನಡೆಯುತ್ತದೆ ಎಂದು ಹೇಳಲಾಗುತ್ತಿದ್ದರೂ ಸಹ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದು ರಾಜಕೀಯ ವೇದಿಕೆಯಾಗಿ ಮಾರ್ಪಾಡಾಗುವುದು ನಿಶ್ಚಿತ ಎನ್ನಲಾಗುತ್ತಿದೆ.