alex Certify ಸಿದ್ದಾಪುರಕ್ಕೂ ವ್ಯಾಪಿಸಿದ PSI ಅಕ್ರಮ ಹಗರಣ; ಆರೋಪಿ ಗಣಪತಿ ಭಟ್ ಪೊಲೀಸರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದಾಪುರಕ್ಕೂ ವ್ಯಾಪಿಸಿದ PSI ಅಕ್ರಮ ಹಗರಣ; ಆರೋಪಿ ಗಣಪತಿ ಭಟ್ ಪೊಲೀಸರ ವಶಕ್ಕೆ

ಕಾರವಾರ: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಪಿ ಎಸ್ ಐ ನೇಮಕಾತಿ ಅಕ್ರಮ ಹಗರಣ ಇದೀಗ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರಕ್ಕೂ ವ್ಯಾಪಿಸಿದ್ದು, ಶಂಕಿತ ಆರೋಪಿಯೊಬ್ಬರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿದ್ದಾಪುರ ತಾಲುಕಿನ ನೆಲೆಮಾವಿನ ನಿವಾಸಿ ಗಣಪತಿ ಭಟ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಗಣಪತಿ ಭಟ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಗಣಪತಿ ಭಟ್ ಅವರನ್ನು ವಶಕ್ಕೆ ಪಡೆದಿದ್ದಾರೆ.

545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೆ ಸಿಐಡಿ ಪೊಲೀಸರು ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...