ಸಿದ್ದು – ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಜನಾರ್ದನ ರೆಡ್ಡಿ ಆಗಮನ….!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಇದಕ್ಕಾಗಿ ವೇದಿಕೆ ಸಿದ್ಧವಾಗಿದೆ. ಕೆಲ ಕ್ಷಣಗಳಲ್ಲಿಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಲಿದೆ.

ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಕೂಡ ಇಂದೇ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಈ ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರಿನ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.

ಗಂಗಾವತಿ ಕ್ಷೇತ್ರದ ನೂತನ ಶಾಸಕ ಜನಾರ್ದನ ರೆಡ್ಡಿ ಅವರು ಕೂಡ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ್ದು, ಚಿತ್ರ ನಟ – ನಟಿಯರು ಸಹ ಈ ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ದುನಿಯಾ ವಿಜಯ್ ಉಮಾಶ್ರೀ, ರಮ್ಯಾ, ರಾಜೇಂದ್ರ ಸಿಂಗ್ ಬಾಬು, ದಕ್ಷಿಣ ಭಾರತದ ಖ್ಯಾತ ನಟ ಕಮಲ ಹಾಸನ್ ಮೊದಲಾದವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read