ಸಿದ್ದರಾಮಯ್ಯನವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದು, ಎಲ್ಲೆಂದರಲ್ಲಿ ಜನ ಸಂದಣಿ ಕಂಡುಬರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಹ ಆಗಮಿಸಿದ್ದು, ಟ್ರಾಫಿಕ್ ನಿರ್ವಹಣೆಗಾಗಿ ಪೊಲೀಸರು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದರ ಮಧ್ಯೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ‘ಸಿದ್ದರಾಮಯ್ಯ ಎಂಬ ನಾನು’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಬಿ. ನಾಗರಾಜ್ ಈ ಚಿತ್ರದ ನಿರ್ದೇಶಕರಾಗಿದ್ದು, ಪೋಸ್ಟರ್ನಲ್ಲಿ ಸಿದ್ದರಾಮಯ್ಯನವರು ಹುಟ್ಟಿದ ವರ್ಷ 1947 ಉಲ್ಲೇಖಿಸಲಾಗಿದೆ.