ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಭಾಗವಹಿಸಲು ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ‘ಟಗರು’ ಅಭಿಮಾನಿಗಳು ಆಗಮಿಸಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ‘ಅಕ್ಕಿ ಭಾಗ್ಯ’ ಯೋಜನೆಯನ್ನು ಪ್ರತಿಬಿಂಬಿಸುವ ಸಲುವಾಗಿ ಅಭಿಮಾನಿಗಳು ಅಕ್ಕಿಯಲ್ಲಿಯೇ ಅವರ ಪ್ರತಿಮೆಯನ್ನು ರಚಿಸಿ ಅದನ್ನು ಕಾರ್ಯಕ್ರಮದ ಸ್ಥಳಕ್ಕೆ ತಂದಿದ್ದಾರೆ.
ಇದರ ಮಧ್ಯೆ ತನ್ನ ವಿಶಿಷ್ಟ ಶೈಲಿಯಿಂದಲೇ ಹುಟ್ಟುಹಬ್ಬದ ವಿಶ್ ಮಾಡುವ ಕಾರಣಕ್ಕಾಗಿ ರಾಜ್ಯದಾದ್ಯಂತ ಮನೆ ಮಾತಾಗಿರುವ ಕಾಫಿ ನಾಡು ಚಂದ್ರು, ಸಿದ್ದರಾಮಯ್ಯನವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.
ಸಿದ್ದರಾಮಯ್ಯನವರ ಅಕ್ಕಿ ಭಾಗ್ಯ ಯೋಜನೆಯನ್ನು ಪ್ರಸ್ತಾಪಿಸಿರುವ ಅವರು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಹಾಲು ನೀಡುವ ಕುರಿತಾಗಿಯೂ ಮಾತನಾಡಿದ್ದಾರೆ. ಬಳಿಕ ತಮ್ಮದೇ ಶೈಲಿಯಲ್ಲಿ ಹಾಡಿನ ಮೂಲಕ ಸಿದ್ದರಾಮಯ್ಯನವರಿಗೆ ವಿಶ್ ಮಾಡಿದ್ದಾರೆ.