ತುಮಕೂರು: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ತುಮಕೂರು ವಿವಿ ಹೆಲಿಪ್ಯಾಡ್ ಗೆ ಬಂದಿಳಿದ ಅಮಿತ್ ಶಾ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ್ ಬೊಮ್ಮಾಯಿ ಅಮಿತ್ ಶಾ ಅವರಿಗೆ ಸಾಥ್ ನೀಡಿದ್ದಾರೆ.
ಪಡ್ಡೆ ಹುಡುಗರ ನಿದ್ದೆಗೆಡಿಸಿದ ತಾನ್ಯ ಹೋಪ್ ಹಾಟ್ ಫೋಟೋಶೂಟ್
ಬಳಿಕ ರಸ್ತೆ ಮಾರ್ಗವಾಗಿ ತೆರಳಿ ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮಠದ ವಿದ್ಯಾರ್ಥಿಗಳು ಪೂರ್ಣಕುಂಭ ಸ್ವಾಗತ ಕೋರಿ, ಬರಮಾಡಿಕೊಂಡರು. ಮಠದಲ್ಲಿ ಅಮಿತ್ ಶಾ, ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದು, ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.