ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲೂ ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿದೆ. ಬಿಬಿಎಂಪಿ ಅಧಿಕಾರಿಗಳು ಹೈರಿಸ್ಕ್ ವಾರ್ಡ್ ಗಳ ಪಟ್ಟಿ ಮಾಡಿದ್ದಾರೆ.
ರಾಜ್ಯದಲ್ಲಿ ನಿನ್ನೆ 25,005 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಅವರಲ್ಲಿ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 18,374 ಜನರಿಗೆ ಸೋಂಕು ತಗುಲಿದ್ದು, 90,893 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನ 9 ವಾರ್ಡ್ ಗಳನ್ನು ಹೈರಿಸ್ಕ್ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಈ ವಾರ್ಡ್ ಗಳಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಗೊಳ್ಳುತ್ತಿದೆ. ಬೆಳ್ಳಂದೂರು, ಬೇಗೂರು, ನ್ಯೂ ತಿಪ್ಪಸಂದ್ರ, ಹೆಚ್ ಎಸ್ ಆರ್ ಲೇಔಟ್, ಹೊರಮಾವು, ದೊಡ್ಡನೆಕುಂದಿ, ಕೋರಮಂಗಲ, ಶಾಂತಲನಗರ, ಆರ್ ಆರ್ ನಗರ ವಾರ್ಡ್ ಗಳಲ್ಲಿ ಪ್ರತಿದಿನ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಅಪಾಯಕಾರಿ ವಲಯ ಎಂದು ಗುರುತಿಸಲಾಗಿದೆ.