ಸುಂದರ್‌ಬನ್ ಪ್ರದೇಶದಲ್ಲಿ ರಾಯಲ್ ಬೆಂಗಾಲ್ ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಈ ಮಧ್ಯೆ ಹುಲಿಗಳು ಸ್ಥಳೀಯ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ಕೂಡ ಹೆಚ್ಚಿವೆ.
ಚಂಡಮಾರುತಗಳಿಂದಾಗಿ ಸುಂದರ್‌ಬನ್‌ನ ಹುಲಿಗಳು ಜನವಸತಿ ಪ್ರದೇಶಗಳತ್ತ ನುಗ್ಗುತ್ತಿವೆ ಎಂದು ಹೇಳಲಾಗುತ್ತಿದೆ. ಈ ಪ್ರದೇಶದಲ್ಲಿನ ಮಾನವ-ಪ್ರಾಣಿಗಳ ಸಂಘರ್ಷಗಳ ಕುರಿತು ಸೆಂಟ್ರಲ್ ವೈಲ್ಡ್ ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
ಈ ಅತಿಕ್ರಮಣಕ್ಕೆ ಪ್ರಮುಖ ಕಾರಣವೆಂದರೆ ಆಹಾರದ ಕೊರತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಹುಲಿಗಳಿಗೆ ನೀರಿನ ಸಮಸ್ಯೆ ಎದುರಾಗಿರುವುದರಿಂದ ಹುಲಿಗಳು ಆಹಾರ ಅರಸಿ ಗ್ರಾಮಗಳಿಗೆ ನುಗ್ಗುತ್ತಿವೆ.
ಮೂರು ವರ್ಷಗಳ ಹಿಂದೆ, ಹುಲಿ ಗಣತಿ ನಡೆದಾಗ ಈ ಪ್ರದೇಶದಲ್ಲಿ ರಾಯಲ್ ಬೆಂಗಾಲ್ ಸಂಖ್ಯೆ 96 ಇತ್ತು ಎಂದು ಹೇಳಲಾಗಿದೆ. ಕಳೆದ ಮೂರು ತಿಂಗಳ ಹಿಂದೆ, ಹಳ್ಳಿಗಳಲ್ಲಿ ಆರು ಹುಲಿ ದಾಳಿಗಳು ನಡೆಸಿವೆ. ಈ ಸಂಬಂಧ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪತ್ರ ಬರೆದಿದೆ. ಕೇಂದ್ರವು ವಿಸ್ತೃತ ತನಿಖೆ ನಡೆಸಿ ಹುಲಿಗಳ ಸಂಖ್ಯೆ ಹೆಚ್ಚಿರುವುದನ್ನು ಗಮನಕ್ಕೆ ತಂದಿದೆ.
ಈ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಅರಣ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಗ್ರಾಮಗಳಲ್ಲಿ ಬೇಲಿಯನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ಅಲ್ಲದೆ ರಾಜ್ಯ ಅರಣ್ಯ ಇಲಾಖೆಯು ರಾಯಲ್ ಬೆಂಗಾಲ್ ಹುಲಿಯನ್ನು ಸಂರಕ್ಷಿಸುವ ಗುರಿಯನ್ನು ಕೂಡ ಹೊಂದಿದೆ.