ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಮಾನವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಭಾರಿ ಮುಖಭಂಗವಾಗಿದೆ.
ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಇದರ ಬೆನ್ನಲ್ಲೇ ಭಾನುವಾರದಂದು ತಮಿಳುನಾಡಿನ ಪ್ರಮುಖ ನಗರಗಳಾದ ಚೆನ್ನೈ, ಕಾಂಚಿಪುರಂ, ಮಧುರೈ ಹಾಗೂ ಚಂಗಲ್ ಪೇಟ್ ಸೇರಿದಂತೆ ಒಟ್ಟು 45 ಸ್ಥಳಗಳಲ್ಲಿ ಸ್ವಯಂ ಸೇವಕರು ಸಾಂಪ್ರದಾಯಿಕ ಉಡುಗೆಯಲ್ಲಿ ಲಾಠಿ ಹಿಡಿದು ಪಥ ಸಂಚಲನ ನಡೆಸಿದ್ದಾರೆ.