ಕರ್ನಾಟಕದ ದಾವಣಗೆರೆ ನಗರ, ದೇಶದಲ್ಲಿ ಅತ್ಯುತ್ತಮ ಸುರಕ್ಷತೆ ಮತ್ತು ಭದ್ರತೆ ಹೊಂದಿರುವ ‘ಸ್ಮಾರ್ಟ್ ಸಿಟಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ದೇಶದ ನೂರು ಸ್ಮಾರ್ಟ್ ಸಿಟಿಗಳ ಪೈಕಿ 21 ನಗರಗಳನ್ನು ಆಯ್ಕೆ ಮಾಡಲಾಗಿದ್ದು, ನವೆಂಬರ್ 6 ರಂದು ಕೇರಳದ ಕೊಚ್ಚಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಈ ಪ್ರಶಸ್ತಿಯನ್ನು ನೀಡಲಿದ್ದು, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರದಾನ ಮಾಡಲಿದ್ದಾರೆ.