ದೇಶದಲ್ಲಿ ಸಾಮಾಜಿಕ ಜಾಲತಾಣಗಳು ಪ್ರಭಾವಿ ಮಾಧ್ಯಮವಾಗಿದ್ದು, ಕೆಲವರು ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡಲು ಇವುಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿಯೇ ಕೇಂದ್ರ ಸರ್ಕಾರ ಈಗಾಗಲೇ ಸುಳ್ಳು ಸುದ್ದಿಗಳನ್ನು ಹರಡದಂತೆ ನಿಗಾ ವಹಿಸಿ ಎಂದು ಸೋಶಿಯಲ್ ಮೀಡಿಯಾ ಸಂಸ್ಥೆಗಳಿಗೆ ಸೂಚನೆ ನೀಡಿತ್ತು.
ಇಷ್ಟಾದರೂ ಕೂಡ ಗೂಗಲ್, ಟ್ವಿಟರ್, ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳು ಈ ಸಂಸ್ಥೆಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪದೇ ಪದೇ ಗಾಳಿಗೆ ಹಾರ್ತಿತ್ತು ಶಿಲ್ಪಾ ಶೆಟ್ಟಿ ಡ್ರೆಸ್
ವಾರ್ತಾ ಮತ್ತು ಪ್ರಚಾರ ಸಚಿವಾಲಯದ ಅಧಿಕಾರಿಗಳು, ಸಾಮಾಜಿಕ ಜಾಲತಾಣ ಕಂಪನಿಗಳ ಪ್ರತಿನಿಧಿಗಳ ಜತೆ ನಡೆಸಿದ ಸಭೆಯಲ್ಲಿ ಸುಳ್ಳು ಸುದ್ದಿಗಳನ್ನು ಹರಡದಂತೆ ಯಾವೆಲ್ಲಾ ಕ್ರಮಕೈಗೊಂಡಿದ್ದೀರಿ. ಏಕೆ ಇವುಗಳ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರೆಂದು ಹೇಳಲಾಗಿದೆ.