ಬೆಳಗಾವಿ: ಎಂಇಎಸ್ ಪುಂಡಾಟ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ, ನೂಕಾಟ-ತಳ್ಳಾಟಗಳು ನಡೆದಿವೆ.
ಹಿರೇಬಾಗೇವಾಡಿ ಟೋಲ್ ಬಳಿ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಕಾರ್ಯಕರ್ತರನ್ನು ತಡೆದ ಪೊಲೀಸರ ಕ್ರಮ ಖಂಡಿಸಿ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಹಲವು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಬಸ್ ಗೆ ಅಡ್ಡಲಾಗಿ ಮಲಗಿ ಇತರೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಶಕ್ಕೆ ಪಡೆಯಲು ಬಂದ ಪೊಲೀಸರು ಹಾಗೂ ಕೆಲ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ.
ಉತ್ತರಾಖಾಂಡ ಸರ್ಕಾರದ ಪ್ರಚಾರ ರಾಯಭಾರಿಯಾದ ರಿಶಬ್ ಪಂತ್
ನಾರಾಯಣಗೌಡ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ಕರವೇ ಮಹಿಳಾ ಕಾರ್ಯಕರ್ತರು ಲಾರಿ ತಡೆದು ನಿಲ್ಲಿಸಿ ಅದರ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ತಡೆದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಾರಾಯಣಗೌಡ, ಪೊಲೀಸರನ್ನು ಮುಂದಿಟ್ಟು ಹೋರಾಟ ಹತ್ತಿಕ್ಕಲಾಗುತ್ತಿದೆ. ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ. ಎಂಇಎಸ್ ಪುಂಡಾಟದ ಬಗ್ಗೆ ಮಾತನಾಡದ ಬೆಳಗಾವಿ ಶಾಸಕರು, ಸಚಿವರು ರಣಹೇಡಿಗಳು. ಇಂದು ಕೂಡ ಸದನದಲ್ಲಿ ಈ ಬಗ್ಗೆ ಮಾತನಾಡದೇ ಮೌನವಹಿಸಿದರೆ ಜನಪ್ರತಿನಿಧಿಗಳು ರಣಹೇಡಿಗಳೆಂದು ಗೊತ್ತಾಗುತ್ತದೆ ಎಂದು ಕಿಡಿಕಾರಿದ್ದಾರೆ.