
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿಯೊಬ್ಬರು ದೊಡ್ಡ ವಿವಾದದಲ್ಲಿ ಸಿಲುಕಿದ್ದಾರೆ. ಮಹಿಳಾ ಕ್ರಿಕೆಟರ್, ಸೂಪರ್ ಮಾರ್ಕೆಟ್‌ನಲ್ಲಿ ಉದ್ಯೋಗಿಯೊಂದಿಗೆ ಜಗಳವಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕದ ವಿಜಯಪುರದಲ್ಲಿ ನಡೆದಿರೋ ಘಟನೆ ಇದು. ರಾಜೇಶ್ವರಿ ಗಾಯಕ್ವಾಡ್ ಅವರ ಕೆಲವು ಪರಿಚಿತರು ಸೂಪರ್ ಮಾರ್ಕೆಟ್‌ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ರಾಜೇಶ್ವರಿ ಗಾಯಕ್ವಾಡ್ ಟೀಂ ಇಂಡಿಯಾದ ಅತ್ಯುತ್ತಮ ಸ್ಪಿನ್ನರ್‌ಗಳಲ್ಲಿ ಒಬ್ಬರು. 31 ವರ್ಷದ ರಾಜೇಶ್ವರಿ, ಸೂಪರ್ ಮಾರ್ಕೆಟ್‌ನಲ್ಲಿ ಉದ್ಯೋಗಿಯೊಂದಿಗೆ ಜಗಳವಾಡುತ್ತಿದ್ದರು. ಸೌಂದರ್ಯವರ್ಧಕಗಳನ್ನು ಖರೀದಿಸಲು ಆಕೆ ಸೂಪರ್ ರ್ಮಾರ್ಕೆಟ್‌ಗೆ ಬಂದಿದ್ದರು. ಉದ್ಯೋಗಿಗಳೊಂದಿಗೆ ರಾಜೇಶ್ವರಿ ಜಗಳ ಮಾಡಿ ಸ್ವಲ್ಪ ಹೊತ್ತಿನಲ್ಲೇ ಆಕೆಯ ಆಪ್ತರು ಬಂದು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಸಿಸಿ ಟಿವಿ ದೃಶ್ಯಾವಳಿಗಳ ಸಮೇತ ಸೂಪರ್ ಮಾರ್ಕೆಟ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಲು ಮುಂದಾದರು.
ಆದ್ರೆ ಉಭಯ ಬಣಗಳು ಸಂಧಾನ ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡಿವೆ. ರಾಜೇಶ್ವರಿ ಗಾಯಕ್ವಾಡ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ರಾಜೇಶ್ವರಿ ಗಾಯಕ್ವಾಡ್ 19 ಜನವರಿ 2014 ರಂದು ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯವನ್ನಾಡುವ ಮೂಲಕ ಟೀಂ ಇಂಡಿಯಾಕ್ಕೆ ಪ್ರವೇಶಿಸಿದ್ದರು. ಇದುವರೆಗೆ ಭಾರತ ಪರ 2 ಟೆಸ್ಟ್, 64 ಏಕದಿನ ಮತ್ತು 44 ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಐದು ವಿಕೆಟ್ ಪಡೆದಿದ್ದಾರೆ. ಏಕದಿನದಲ್ಲಿ 99 ಹಾಗೂ ಟಿ20ಯಲ್ಲಿ ರಾಜೇಶ್ವರಿ 54 ವಿಕೆಟ್‌ಗಳನ್ನು ಪಡೆದಿದ್ದಾರೆ.