alex Certify ಸೆಪ್ಟೆಂಬರ್ 30ರಂದು ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 30ರಂದು ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ರಿಲೀಸ್

ಹಿರಿಯ ನಟ ನವರಸನಾಯಕ ಜಗ್ಗೇಶ್ ನಟನೆಯ ವಿಜಯ್ ಪ್ರಸಾದ್ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೇನರ್ ಸಿನಿಮಾ ‘ತೋತಾಪುರಿ’ ಈಗಾಗಲೇ ‘ಬಾಗ್ಲು ತಗಿ ಮೇರಿ ಜಾನ್’ ಎಂಬ ಹಾಡಿನಿಂದಲೇ ಭರ್ಜರಿ ಸೌಂಡ್ ಮಾಡುತ್ತಿದೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಸುದ್ದಿಗೋಷ್ಠಿಯಲ್ಲಿ ನಿನ್ನೆ ಅನೌನ್ಸ್ ಮಾಡಲಾಗಿದ್ದು ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆ ಕಾಣಲಿದೆ.

ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಗೆ ಜೋಡಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದು, ಕೆ. ಎ. ಸುರೇಶ್ ನಿರ್ಮಾಣ ಮಾಡಿದ್ದಾರೆ. ಸುಮನ್ ರಂಗನಾಥ್, ಡಾಲಿ ಧನಂಜಯ್, ದತ್ತಾತ್ರೆಯ, ವೀಣಾ ಸುಂದರ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...