alex Certify ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ಫೋಟೋ ತೆಗೆದುಕೊಳ್ಳುವಾಗಲೇ ಕೊಚ್ಚಿ ಹೋದ ಮಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ಫೋಟೋ ತೆಗೆದುಕೊಳ್ಳುವಾಗಲೇ ಕೊಚ್ಚಿ ಹೋದ ಮಾಣಿ

ಸೆಲ್ಫಿ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಲೈಕ್ ಗಿಟ್ಟಿಸಿಕೊಳ್ಳಬೇಕೆಂಬ ಹಪಾಹಪಿ ಈಗಾಗಲೇ ಹಲವರ ಜೀವವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅಂತದೇ ಮತ್ತೊಂದು ಪ್ರಕರಣ ನಡೆದಿದೆ.

ರಾಜ್ಯದಲ್ಲಿ ಪ್ರಸ್ತುತ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು, ಕೆರೆಕಟ್ಟೆಗಳು, ನದಿಗಳು ತುಂಬಿ ಹರಿಯುತ್ತಿವೆ. ಹೀಗೆ ತುಂಬಿ ಹರಿಯುತ್ತಿದ್ದ ಹಳ್ಳದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಯುವಕ ಸಾವನ್ನಪ್ಪಿದ್ದಾನೆ.

ಕಲಬುರಗಿ ಜಿಲ್ಲೆ ಅಫಜಲ್ಪುರ ತಾಲೂಕಿನ ಬಿದನೂರದಲ್ಲಿ ಈ ಘಟನೆ ನಡೆದಿದ್ದು, ಕೆಟರಿಂಗ್ ಸಂಸ್ಥೆಯೊಂದರಲ್ಲಿ ವೇಟರ್ ಆಗಿದ್ದ 20 ವರ್ಷದ ಕಾಮಣ್ಣ ಎಂಬ ಯುವಕ ಸೆಲ್ಫಿ ಕ್ಲಿಕ್ಕಿಸುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...